ಗುರುವಾರ, ನವೆಂಬರ್ 16, 2023

ಕನ್ನಡ ಮತ್ತು ಸಂಸ್ಕøತಿ ಇಲಾಖೆ; ಸಾಂಸ್ಕøತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.16(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ವಿವಿಧ ಸಾಂಸ್ಕøತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಪೆÇ್ರೀತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾμÁ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪೆÇ್ರೀತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕøತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪೆÇ್ರೀತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು www.Sevasindhu.karnataka.gov.in ಮುಖಾಂತರ ಡಿಸೆಂಬರ್ 13ರವರೆಗೆ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಆದೇಶದಂತೆ ಮಾರ್ಗಸೂಚಿಯನ್ನು ಸೇವಾಸಿಂಧು ಪೆÇೀರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.08022279954, ಮೊ.9986837037, 8792662814, 8792662816, 08022213530 ಅನ್ನು ಅಥವಾ ಆಯಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ