ಶುಕ್ರವಾರ, ನವೆಂಬರ್ 10, 2023
ಸಚಿವ ಎಚ್.ಕೆ.ಪಾಟೀಲ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನ.11ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.11ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ನಗರದ ತಾಳೂರು ರಸ್ತೆಯ ಪಾರ್ವತಿ ನಗರದ ಹೊಸ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ “ಬಳ್ಳಾರಿ ಜಿಲ್ಲೆಯ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನೆ” ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಸಂಜೆ 05 ಗಂಟೆಗೆ ಬಳ್ಳಾರಿಯಿಂದ ಗದಗಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ