ಮಂಗಳವಾರ, ನವೆಂಬರ್ 21, 2023

ರೈತರು ಕಡ್ಡಾಯವಾಗಿ ಎಫ್‍ಐಡಿ ಮಾಡಿಸಿಕೊಳ್ಳಿ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ಎಲ್ಲಾ ರೈತರು ಕಡ್ಡಾಯವಾಗಿ ಎಫ್‍ಐಡಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. ಎಫ್‍ಐಡಿ ಅಂದರೆ ಫಾರ್ಮರ್ ಐಡೆಂಟಿಫಿಕೇಷನ್ ಡಾಕ್ಯುಮೆಂಟ್ (FARMER IDENTIFICATION DOCUMENT) ರೈತರ ಗುರುತಿನ ಚೀಟಿ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್‍ಐಡಿ ಮಾಡಿಸಿಕೊಳ್ಳಬೇಕು, ಈಗಾಗಲೇ ಇದ್ದಲ್ಲಿ, ರೈತರಿಗೆ ಸಂಬಂಧಿಸಿದ ಎಲ್ಲಾ ಹೊಲದ ಸರ್ವೇ ನಂಬರ್‍ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಬೇಕು, ಜಂಟಿ ಖಾತೆದಾರರು ಇದ್ದಲ್ಲಿ ಪ್ರತಿ ಒಬ್ಬ ಖಾತೆದಾರ ಪ್ರತ್ಯೇಕವಾಗಿಮ ಎಫ್‍ಐಡಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. *ಎಫ್‍ಐಡಿ ಮಾಡಲು ಬೇಕಾದ ದಾಖಲೆಗಳು:* ಆಧಾರ್ ಕಾರ್ಡ್, ಬ್ಯಾಂಕ್ ಪಾಸ್-ಬುಕ್, ಕರ್ನಾಟಕ ರಾಜ್ಯದ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರಬೇಕು, ಪಹಣಿ, ದೂರವಾಣಿ ಸಂಖ್ಯೆ ಕಡ್ಡಾಯ, ಭಾವಚಿತ್ರ(ಫೆÇೀಟೋ), ಜಾತಿ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಬೇಕಾಗುತ್ತವೆ. ಎಫ್‍ಐಡಿ ಮಾಡಿಸದೇ ಇದ್ದಲ್ಲಿ ರೈತರಿಗೆ ಬರುವ ಯಾವುದೇ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗುವುದಿಲ್ಲ. ರೈತರು ಎಫ್‍ಐಡಿ ಮಾಡಿಸಲು ಹತ್ತಿರದ ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ