ಶನಿವಾರ, ನವೆಂಬರ್ 4, 2023

ಯುವತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ನ.04(ಕರ್ನಾಟಕ ವಾರ್ತೆ): ಸಿರುಗುಪ್ಪ ಪಟ್ಟಣದ 16ನೇ ವಾರ್ಡ್ ಕೃಷ್ಣ ನಗರ ಹಿಂದುಗಡೆ ನಿವಾಸಿ ತಸ್ಲೀಮ್.ಎನ್ ತಂದೆ ನಹೀಮ್ ಎನ್ನುವ 23 ವರ್ಷದ ಯುವತಿ ಅ.01 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಕಾಣೆಯಾದ ಯುವತಿಯ ಚಹರೆ ಗುರುತು: ಎತ್ತರ 5 ಅಡಿ, ಸಾಧಾರಣ ಮೈಕಟ್ಟು, ದುಂಡುಮುಖ, ಕೆಂಪನೇ ಮೈಬಣ್ಣ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ತಿಳಿ ಕಪ್ಪು ಬಣ್ಣದ ಟಾಪ್, ಕಪ್ಪು ಬಣ್ಣದ ಲೆಗ್ಗಿನ್, ಗ್ರೇ ಬಣ್ಣದ ಬುರ್ಖಾ ಧರಿಸಿರುತ್ತಾಳೆ. ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆ ಮಾತನಾಡುತ್ತಾಳೆ. ಮೇಲ್ಕಂಡ ಚಹರೆಯುಳ್ಳ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‍ಐ ದೂ.08396-220333, ಸಿರುಗುಪ್ಪ ವೃತ್ತದ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿಎಸ್‍ಪಿ ದೂ.08392-276000 ಹಾಗೂ ಬಳ್ಳಾರಿ ಎಸ್‍ಪಿ ಅವರ ದೂ.08932-258400, ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ