ಸೋಮವಾರ, ನವೆಂಬರ್ 6, 2023

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.06(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ನ.28ರೊಳಗೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ರಂಗಮಂದಿರ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ