ಮಂಗಳವಾರ, ನವೆಂಬರ್ 7, 2023

ಕಾರ್ಯನಿರ್ವಹಿಸದ ಸಹಕಾರ ಸಂಘಗಳು ಸಮಾಪನೆ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಸೂಚನೆ

ಬಳ್ಳಾರಿ,ನ.07(ಕರ್ನಾಟಕ ವಾರ್ತೆ): ಜಿಲ್ಲೆಯ ಕೆಲವು ಸಹಕಾರ ಸಂಘಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಂಡ ಸಹಕಾರಿ ಸಂಘಗಳನ್ನು ಸಮಾಪನೆಗೊಳಿಸಲಾಗುತ್ತಿದ್ದು, ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಸಲ್ಲಿಸಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಕೇಸರಿಮಠ.ಬಿ.ಎ ಅವರು ತಿಳಿಸಿದ್ದಾರೆ. *ಸಮಾಪನೆಗೊಳಿಸಲಾಗುವ ಸಂಘಗಳಿವು:* ಬಳ್ಳಾರಿ ಜಿಲ್ಲಾ ಪೊಲೀಸ್ ನೌಕರರ ಪತ್ತಿನ ಸಹಕಾರ ಸಂಘ ನಿ. ಹಾಗೂ ಎಂಎಂಟಿಸಿ ನೌಕರರ ಪತ್ತಿನ ಸಹಕಾರ ಸಂಘ ನಿ. ಈ ಮೇಲ್ಕಂಡ ಸಹಕಾರ ಸಂಘಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಂಡ ಕಾರಣ ಸಹಕಾರ ಸಂಘಗಳನ್ನು ಸಮಾಪನೆಗೊಳಿಸುವ ಕುರಿತಂತೆ ಸಹಕಾರ ಸಂಘಗಳ ಜಂಟಿ ನಿಬಂಧಕರು ಅವರು ಸೂಚಿಸಿರುತ್ತಾರೆ. ಆದ್ದರಿಂದ ಈ ಸಹಕಾರ ಸಂಘಗಳ ಕಾರ್ಯದರ್ಶಿ ಹಾಗೂ ಸಂಘಗಳ ಸದಸ್ಯರಿಂದ ಆಕ್ಷೇಪಣೆ ಅಥವಾ ಸಮಜಾಯಿಸಿ ಏನಾದರೂ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ, 1959ರ ಕಲಂ 72(2) ರನ್ವಯ ಸಮಾಪನೆಗೊಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ