ಶುಕ್ರವಾರ, ನವೆಂಬರ್ 24, 2023
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಬೆಳೆ ನೊಂದಣಿ ಹಾಗೂ ಖರೀದಿ ಪ್ರಕ್ರಿಯೆ
ಬಳ್ಳಾರಿ,ನ.24(ಕರ್ನಾಟಕ ವಾರ್ತೆ):
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2023-24ನೇ ಸಾಲಿನಲ್ಲಿ ಭತ್ತ, ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿ.01ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ರೈತರ ನೊಂದಣಿ ಪ್ರಕ್ರಿಯೆಯು ರಾಗಿ ಮತ್ತು ಜೋಳ ಬೆಳೆಗಳಿಗೆ ಡಿ.01ರಿಂದ ನಡೆಯಲಿದ್ದು, ಭತ್ತ ಬೆಳೆಗೆ ಈಗಾಗಲೇ ಆರಂಭವಾಗಿದೆ ಹಾಗೂ ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆಯು 2024ನೇ ಜನವರಿ 1ರಿಂದ 2024ನೇ ಮಾರ್ಚ್ 31ರವರೆಗೆ ನಡೆಯಲಿದೆ.
ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ (ಪ್ರತಿ ಕ್ವಿಂಟಲ್‍ಗೆ) ರೂ.2183, ಗ್ರೇಡ್ ಎ-ಭತ್ತಕ್ಕೆ ರೂ.2203, ರಾಗಿಗೆ ರೂ.3846, ಹೈಬ್ರೀಡ್-ಬಿಳಿ ಜೋಳಕ್ಕೆ ರೂ.3180, ಮಾಲ್ದಂಡಿ-ಬಿಳಿ ಜೋಳಕ್ಕೆ ರೂ.3225 ಕನಿಷ್ಠ ಬೆಂಬಲ ಬೆಲೆಗಳಾಗಿವೆ.
ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ ಮಾರಾಟ ಮಾಡಲು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
*ನೊಂದಣಿ ಮತ್ತು ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿಯ ತಾಲ್ಲೂಕಿನ ಎಪಿಎಂಸಿ ಯಾರ್ಡ್, ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಹಾಗೂ ಎಸ್‍ಡಬ್ಲ್ಯೂಸಿ ಗೋದಾಮು-01 ಮತ್ತು 02. ಕುರುಗೋಡು ತಾಲ್ಲೂಕಿನ ಎಪಿಎಂಸಿ ಯಾರ್ಡ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ. ಸಿರುಗುಪ್ಪ ತಾಲ್ಲೂಕಿನ ಎಪಿಎಂಸಿ ಯಾರ್ಡ್, ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ. ಸಂಡೂರು ತಾಲ್ಲೂಕಿನ ಎಪಿಎಂಸಿ ಯಾರ್ಡ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕಂಪ್ಲಿ ತಾಲ್ಲೂಕಿನ ಎಪಿಎಂಸಿ ಯಾರ್ಡ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನೊಂದಣಿ ಮತ್ತು ಖರೀದಿ ಕೇಂದ್ರಗಳಾಗಿವೆ.
*ಖರೀದಿ ಅಧಿಕಾರಿಗಳು ಮತ್ತು ಗ್ರೇಡರ್‍ಗಳು:*
ಬಳ್ಳಾರಿಯ ತಾಲ್ಲೂಕಿನ ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನರಸಿಂಹ ಅವರ ಮೊ.900677875 ಹಾಗೂ ಬಳ್ಳಾರಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಸುಷ್ಮಾ ಅವರ ಮೊ.8277930412, ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಹುಸೇನ್ ಸಾಬ್ ಅವರ ಮೊ.8951307333 ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ರಾಘವೇಂದ್ರ ಅವರ ಮೊ.9740775129.
ಸಿರುಗುಪ್ಪ ತಾಲ್ಲೂಕಿನ ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋಹನ್‍ಗೌಡ ಅವರ ಮೊ.9731421918 ಹಾಗೂ ತೆಕ್ಕಲಕೋಟೆಯ ಕೃಷಿ ಅಧಿಕಾರಿ ಹೇಮಲ ನಾಯಕ್ ಅವರ ಮೊ.9902751026, ಸಂಡೂರಿನ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಶಿವಲಿಂಗಪ್ಪ ಅವರ ಮೊ.9980676497 ಹಾಗೂ ಕೃಷಿ ಅಧಿಕಾರಿ ರಾಘವೇಂದ್ರ ಅವರ ಮೊ.8277930434, ಕಂಪ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರಂಗಪ್ಪ ಮೊ.9740838910, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಶಿವಪ್ಪ ಬಾರಿಗಿಡದ ಮಡಿವಾಳರ ಎ.ಎಸ್.ಅವರ ಮೊ.9611949460 ಅವರನ್ನು ಸಂಪರ್ಕಿಬಹುದಾಗಿದೆ.
*ಸೂಚನೆಗಳು:*
ಎಲ್ಲಾ ಹೋಬಳಿ ಮಟ್ಟದ ಖರೀದಿ ಕೇಂದ್ರಗಳಲ್ಲಿ ಆನ್‍ಲೈನ್ ಮುಖಾಂತರ ರೈತರ ನೊಂದಣಿಯನ್ನು ಮಾಡಲಾಗುವುದು. ಖರೀದಿ ಕೇಂದ್ರಕ್ಕೆ ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಅವರ ಫ್ರೂಟ್ಸ್ ಐ.ಡಿ. (ರೈತರ ನೊಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ (Farmer Registration and Unified Beneficiary Information System- FRUITS) ಮತ್ತು ಆಧಾರ್‍ನೊಂದಿಗೆ ನೊಂದಣಿ ಕೇಂದ್ರಕ್ಕೆ ಬರಬೇಕು. ಬೆಂಬಲ ಬೆಲೆಗಾಗಿ ರೈತರನ್ನು ಪ್ರತ್ಯೇಕವಾಗಿ ನೊಂದಾಯಿಸದೇ ಕೇವಲ ಅವರ ಫ್ರೂಟ್ಸ್ ಐ.ಡಿ.ಯ ಮೂಲಕ ಖರೀದಿಗೆ ನೊಂದಾಯಿಸಲಾಗುತ್ತದೆ.
ರೈತರ ಫ್ರೂಟ್ಸ್ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಷ್ಕರಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.
ಪ್ರತಿಯೊಬ್ಬ ರೈತರ ಫ್ರೂಟ್ಸ್ ಐ.ಡಿ. ನಮೂದಿಸಿದ ನಂತರ ಫ್ರೂಟ್ಸ್ ದತ್ತಾಂಶದಿಂದ ರೈತರ ಅಗತ್ಯ ಮಾಹಿತಿ ಲಭ್ಯವಾಗಲಿದೆ. ಮಾಹಿತಿಯಲ್ಲಿ ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಮತ್ತು ಬೆಳೆದಿರುವ ಬೆಳೆಯ ವಿವರಗಳು ಹಾಗೂ ರೈತರ ಬ್ಯಾಂಕ್ ಖಾತೆಯ ವಿವರಗಳು ಲಭ್ಯವಿರುತ್ತವೆÉ. ಹಾಗಾಗಿ ಪ್ರತ್ಯೇಕವಾಗಿ ಬೇರೆ ಯಾವುದೇ ದಾಖಲೆ ನೀಡುವ ಅವಶ್ಯಕತೆ ಇರುವುದಿಲ್ಲ. ಫ್ರೂಟ್ಸ್ ದತ್ತಾಂಶದನ್ವಯ ರೈತರ ಬೆಳೆ ಸಮೀಕ್ಷೆ ವಿವರದಂತೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ತೋರಿಸಲಾಗುವುದು.
ಖರೀದಿ ಕೇಂದ್ರಗಳಲ್ಲಿ ನೊಂದಣಿ ಮಾಡಿದಾಗ ರೈತರಿಗೆ ತಮ್ಮ ಜಮೀನು ಮತ್ತು ಬೆಳೆ ವಿವರ ನೋಡಲು ಅವಕಾಶವಿದೆ. ರೈತರು ಖರೀದಿ ವಿವರಗಳನ್ನು ಒಪ್ಪಿ ನಮೂದಿಸಿದ ನಂತರ ಸ್ವೀಕೃತಿಯನ್ನು ಮುದ್ರಿಸಿ ರೈತರರಿಗೆ ನೀಡಲಾಗುವುದು. ರೈತರು ಭತ್ತ, ರಾಗಿ, ಜೋಳ ಸರಬರಾಜು ಮಾಡುವಾಗ ಎಫ್.ಎ.ಕ್ಯೂ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಲಾಗುವುದು.
*ಬೆಳೆಗಳ ಖರೀದಿ ಮಿತಿ:*
ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ಜೋಳವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು.
ರಾಗಿಯನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಹಣಪಾವತಿ:*
ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳÀ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು.
ಮಧ್ಯವರ್ತಿಗಳು, ಏಜೆಂಟರ್‍ಗಳು ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದ್ದಾರೆ.
ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ತಾಲ್ಲೂಕಿನ ತಹಶೀಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ವೆಂಕೆಟೇಶ ಅವರ ಮೊ.9036484002 ಹಾಗೂ ಸಹಾಯಕ ಕಾರ್ಯದರ್ಶಿ ಡಿ.ಎಂ.ಆಶಿಕ್ ಆಲಿ ಅವರ ಮೊ.9686935278 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ