ಮಂಗಳವಾರ, ನವೆಂಬರ್ 7, 2023
ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆಗಳು ವೆಬ್‍ಸೈಟ್ www.kannadasiri.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿಗಳನ್ನು ಡಿಸೆಂಬರ್ 07ರೊಳಗಾಗಿ ಈ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ