ಮಂಗಳವಾರ, ನವೆಂಬರ್ 28, 2023

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು ಗ್ರಾಮದ 1ನೇ ವಾರ್ಡ್ ಕೋಟೆಯ ನಿವಾಸಿ ತಿಪ್ಪೇಸ್ವಾಮಿ ಎನ್ನುವ 19 ವರ್ಷದ ಯುವಕ ನ.18 ರಂದು ಕಾಣೆಯಾಗಿರುವ ಕುರಿತು ಬ್ರೂಸ್ ಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.5 ಅಡಿ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ಕಪ್ಪು ಬಣ್ಣದ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‍ಪೇಟೆ ಪೆÇಲೀಸ್ ಠಾಣೆಯ ದೂ.08392-272022, ಪಿ.ಐ ಮೊ.9480803045 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ