ಸೋಮವಾರ, ನವೆಂಬರ್ 27, 2023
ಎಲ್ಲಾ ತಾಲ್ಲೂಕುಗಳಲ್ಲಿ ಪ್ರತಿ ಮಂಗಳವಾರದ ಆರೋಗ್ಯ ಮೇಳದಲ್ಲಿ ತಪ್ಪದೇ ಆರೋಗ್ಯ ಸೇವೆ ಪಡೆಯಿರಿ: ಡಿಹೆಚ್‍ಒ ಡಾ.ವೈ ರಮೇಶ್‍ಬಾಬು
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಅಂತ್ಯೋದಯ ರೂಪದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಕಡು ಬಡವರಿಗೆ ಮುಟ್ಟಿಸುವ ‘ಆಯುಷ್ಮಾನ್ ಭವ’ ಅಭಿಯಾನದಡಿ ಎಲ್ಲಾ ತಾಲ್ಲೂಕುಗಳಲ್ಲಿ ಯಶಸ್ವಿಯಾಗಿ ಆರೋಗ್ಯ ಮೇಳಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ.ರಮೇಶ್ ಬಾಬು ವಿನಂತಿಸಿದ್ದಾರೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬೆಂಬಲದೊಂದಿಗೆ ಜಿಲ್ಲಾ ಆಸ್ಪತ್ರೆ, ವಿಮ್ಸ್ ಹಾಗೂ ಸ್ಥಳೀಯ ತಜ್ಞ ವೈದ್ಯರುಗಳಿಂದ ಸಮುದಾಯ, ಪ್ರಾಥಮಿಕ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಕ್ಲಿನಿಕ್, ಆಯುಷ್ಮತಿ ಕ್ಲಿನಿಕ್‍ಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿಗಳ ಮೂಲಕ ಎಲ್ಲಾ ತಾಲ್ಲೂಕುಗಳಲ್ಲಿ ಉಪಕೇಂದ್ರ - ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಮೇಳಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 1515 ಆರೋಗ್ಯ ಮೇಳಗಳನ್ನು ಆಯೋಜಿಸಲಾಗಿದೆ. ಇಲ್ಲಿಯವರೆಗೆ 79630 ಜನರು ತಪಾಸಣೆಗೆ ಒಳಪಟ್ಟಿದ್ದು, ಇವರಲ್ಲಿ 7792 ಗರ್ಭಿಣಿಯರು ಸೇರಿದ್ದಾರೆ. ಶಿಬಿರದಲ್ಲಿ 59662 ಜನಕ್ಕೆ ರಕ್ತದೊತ್ತಡ ಮತ್ತು 57180 ಜನರಿಗೆ ಮಧುಮೇಹ ಪರೀಕ್ಷೆ ಕೈಗೊಳ್ಳಲಾಗಿದೆ. ಅಲ್ಲದೇ 32085 ಜನರಿಗೆ ಬಾಯಿ ಕ್ಯಾನ್ಸರ್ 10040 ಜನರಿಗೆ ಸ್ತನ ಕ್ಯಾನ್ಸರ್, 5058 ಜನರಿಗೆ ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ ಮಾಡಲಾಗಿದೆ. 7846 ಜನರಿಗೆ ನೇತ್ರ ಪರೀಕ್ಷೆ ಮಾಡಲಾಗಿದ್ದು, 8872 ಜನರಿಗೆ ಕ್ಷಯರೋಗದ ಪರೀಕ್ಷೆ ಮಾಡಲಾಗಿದೆ ಹಾಗೂ 5906 ಜನರಿಗೆ ಕುಷ್ಠರೋಗ ಪರೀಕ್ಷೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
3300 ಜನರಿಗೆ ಕುಟುಂಬ ಕಲ್ಯಾಣದ ವಿಧಾನಗಳ ಸೇವೆಗಳನ್ನು ಒದಗಿಸಲಾಗಿದೆ. ಶಿಬಿರಗಳಲ್ಲಿ ಇ-ಸಂಜೀವಿನಿ ಆಪ್ ಮೂಲಕ ತಜ್ಞ ವೈದ್ಯರನ್ನು ಯಾವುದೇ ಹಣದ ವೆಚ್ಚವಿಲ್ಲದೆ 9223 ಜನ ಸಂಪರ್ಕಿಸಿದ್ದಾರೆ. ಶಿಬಿರದಲ್ಲಿ 8382 ಜನರಿಗೆ ಆಯುಷ್ ಪದ್ದತಿ ಸೇವೆ ನೀಡಲಾಗಿದೆ. ಮೇಳಗಳಲ್ಲಿ 1275 ಆಹಾರ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದಡಿ 2898 ಮಕ್ಕಳಿಗೆ ಲಸಿಕೆಯನ್ನು ಹಾಕಲಾಗಿದೆ. ಶಿಬಿರಗಳಲ್ಲಿ 3888 ಆಯುಷ್ಮಾನ ಭಾರತ್ ಕಾರ್ಡ್‍ಗಳನ್ನು ಸೃಜನೆ ಮಾಡಲಾಗಿದೆ ಮತ್ತು 18493 ಜನರಿಗೆ ಆಭಾ ಕಾರ್ಡ್ ರಚಿಸಲಾಗಿದೆ ಎಂದಿದ್ದಾರೆ.
ಅಭಿಯಾನಡಿಯಲ್ಲಿ 89 ಉಚಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ 3155 ರಕ್ತ ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ಒಟ್ಟು ಅಂಗಾಂಗ ದಾನ ನೋಂದಣಿಯಲ್ಲಿ ಜಿಲ್ಲೆಯಲ್ಲಿ 1190 ಜನರು ಅಂಗಾಂಗ ದಾನ ನೋಂದಣಿಯನ್ನು ಮಾಡಿದ್ದು ರಾಜ್ಯಮಟ್ಟದಲ್ಲಿ ಮೊದಲ ಸ್ಥಾನದಲ್ಲಿ ಬಳ್ಳಾರಿ ಜಿಲ್ಲೆ ಇದೆ ಎಂದು ತಿಳಿಸಿದ್ದಾರೆ.
ಎಲ್ಲ ಸಾರ್ವಜನಿಕರು ಆಯುμÁ್ಮನ್ ಭಾರತ ಕಾರ್ಡ್‍ಗಳನ್ನು ಮಾಡಿಸುವ ಮೂಲಕ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೆ ಹಾಗೂ ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸುಸಜ್ಜಿತ ಸರಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆಯಬೇಕು. ಕಾರ್ಡ್‍ಗಳನ್ನು ಗ್ರಾಮ್ ಒನ್, ಕರ್ನಾಟಕ ಒನ್, ಬಳ್ಳಾರಿ ಒನ್‍ಗಳಲ್ಲಿ ಮಾಡಿಸಬೇಕು ಎಂದು ವಿನಂತಿಸಿದ್ದಾರೆ.
ಅಲ್ಲದೇ ಆಯುಷ್ಮಾನ್ ಭಾರತ ಹೆಲ್ತ್ ಅಕೌಂಟ್ ಮಾಡಿಸುವ ಮೂಲಕ ದೇಶದ ಯಾವುದೇ ಭಾಗದಲ್ಲಿ ಚಿಕಿತ್ಸೆಗೆ ತೆರಳಿದರೂ ಸಹ ಸಕಾಲದಲ್ಲಿ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗಿದೆ. ಪ್ರತಿಯೊಬ್ಬರೂ ತಪ್ಪದೆ ನೋಂದಣಿ ಮಾಡಿಸಬೇಕು.
ಜಿಲ್ಲೆಯಲ್ಲಿ ಆರೋಗ್ಯ ಮೇಳಗಳ ಯಶಸ್ವಿಗಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಮತ್ತು ತಂಡ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ಹಾಗೂ ತಾಲ್ಲೂಕ ಆರೋಗ್ಯ ಅಧಿಕಾರಿಗಳು ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಲಾಗುತ್ತಿದ್ದು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಾಹಿತಿ ನೀಡುತ್ತಿದ್ದು, ಆರೋಗ್ಯ ಶಿಕ್ಷಣಾಧಿಕಾರಿಗಳು ಆರೋಗ್ಯ ಜಾಗೃತಿ ಕಾರ್ಯ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರು ಆರೋಗ್ಯ ಮೇಳಗಳಲ್ಲಿ ಭಾಗವಹಿಸಿ ಆರೋಗ್ಯಯುತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಡಿಹೆಚ್‍ಒ ಡಾ.ವೈ ರಮೇಶ್ ಬಾಬು ಅವರು ಕೋರಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)













ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ