ಮಂಗಳವಾರ, ನವೆಂಬರ್ 21, 2023

ತೋಟಗಾರಿಕೆ ಇಲಾಖೆ; ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ.ನ,21(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ, ರಾಷ್ಟ್ರೀಯ ಎಣ್ಣೆಕಾಳು ಮತ್ತು ಎಣ್ಣೆ ತಾಳೆ ಅಭಿಯಾನ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆ ಯೋಜನೆಗಳಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿ(ಶೇ.20), ಪರಿಶಿಷ್ಟ ಪಂಗಡ(ಶೇ.7), ಅಲ್ಪಸಂಖ್ಯಾತರು(ಶೇ.15), ವಿಕಲ ಚೇತನರು(ಶೇ.5) ಮತ್ತು ರೈತ ಮಹಿಳೆಯರಿಗೆ (ಶೇ.33)ರಷ್ಟು ಅನುದಾನ ಮೀಸಲಿರಸಲಾಗಿದೆ. ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸಹಾಯಧನ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿ ಹಾಗೂ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯ ದೂ.08392-278179ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ