ಗುರುವಾರ, ನವೆಂಬರ್ 23, 2023

ಸಮಾಜ ಕಲ್ಯಾಣ ಇಲಾಖೆ; ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.23(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಾಗಿ (ಇಡಿಪಿ ಟ್ರೈನಿಂಗ್) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ. ಅರ್ಜಿದಾರರು 21 ರಿಂದ 50 ವರ್ಷ ಒಳಗಿನವರಾಗಿರಬೇಕು. ಪಿಯುಸಿ ಹಾಗೂ ಮೇಲ್ಪಟ್ಟು ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆಸಕ್ತವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್‍ಲೈನ್ ವೆಬ್‍ಸೈಟ್ www.scsptsp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ