ಸೋಮವಾರ, ನವೆಂಬರ್ 6, 2023

ಕ್ರೀಡಾಪಟುಗಳಿಗೆ ನಗದು ಪುರಸ್ಕಾರ: ಅರ್ಜಿ ಆಹ್ವಾನ

ಬಳ್ಳಾರಿ,ನ.06(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021 ಮತ್ತು 2022 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳು ಅರ್ಜಿಗಳನ್ನು ನವೆಂಬರ್ 27ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರಂಗಮಂದಿರ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಿ ನಿರ್ದೇಶಕಿ ಕೆ.ಗ್ರೇಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ