ಬುಧವಾರ, ನವೆಂಬರ್ 29, 2023

ಕುರೇಕುಪ್ಪ: ಡೆಸ್ಕ್‍ಟಾಪ್ ಕಂಪ್ಯೂಟರ್, ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗದ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಶೇ.24.10, 7.25 ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೌಲಭ್ಯದ ವಿವರ: ಕುರೇಕುಪÀ್ಪ ಪುರಸಭೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಜನಾಂಗದ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡೆಸ್ಕ್‍ಟಾಪ್ ಕಂಪ್ಯೂಟರ್ ಅಥವಾ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ಸೂಚನೆ: ಅರ್ಜಿಗಳನ್ನು ಉಚಿತವಾಗಿ ಕುರೇಕುಪÀ್ಪ ಪುರಸಭೆ ಕಚೇರಿಯಲ್ಲಿ ಪಡೆಯಬಹುದು, ಡಿ.31ರೊಳಗಾಗಿ ಪುರಸಭೆ ಕಚೇರಿ ನಾಮಫಲಕದಲ್ಲಿ ಸೂಚಿಸಲಾದ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು, ತಡವಾಗಿ ಬಂದಂತಹ ಹಾಗೂ ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು. ಮೇರಿಟ್ ಆಧಾರದ ಮೇಲೆ ಡೆಸ್ಕ್ ಟಾಪ್ ಕಂಪ್ಯೂಟರ್ ಅಥಾವಾ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿ ಹಾಗೂ ದೂ.08395-250970ಗೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ