ಸೋಮವಾರ, ನವೆಂಬರ್ 6, 2023
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆ ಅಡಿ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅರ್ಹರಿಂದ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕಿ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಅರ್ಹರು ಅರ್ಜಿಗಳನ್ನು ನ.28 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರಂಗಮಂದಿರ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ