ಬುಧವಾರ, ನವೆಂಬರ್ 29, 2023

ಅರ್ಜಿ ಆಹ್ವಾನ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವೆಬ್‍ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಭೇಟಿ ನೀಡಬಹುದು. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ವಿವರ, ಅರ್ಹತೆ, ದಾಖಲೆಗಳು ಹಾಗೂ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು 2024ರ ಜ.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಮೊ.8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂ.1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ