ಸೋಮವಾರ, ನವೆಂಬರ್ 13, 2023

ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನ; ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವಂತೆ ಮನವಿ

ಬಳ್ಳಾರಿ,ನ.13(ಕರ್ನಾಟಕ ವಾರ್ತೆ): ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಬೇಕು ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ. ದೀಪಾವಳಿ ಹಬ್ಬ ಆಚರಿಸುವ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಪೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿರ್ದೇಶನ ನೀಡಿದೆ. ಪಟ್ಟಣದಲ್ಲಿ ಹಸಿರು ಪಟಾಕಿಯಲ್ಲದೇ ಇನ್ನಾವುದಾದರೂ ಪಟಾಕಿಗಳ ದಾಸ್ತಾನು ಮತ್ತು ಮಾರಾಟ ಕಂಡು ಬಂದಲ್ಲಿ ತಹಶೀಲ್ದಾರರು, ಪೆÇೀಲಿಸ್ ಅಧಿಕಾರಿಗಳು ಹಾಗೂ ಪುರಸಭೆಗೆ ಮಾಹಿತಿ ನೀಡಬೇಕು. ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಸ್ಥಳೀಯ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲು ನಿಷೇಧಿತ ಪಟಾಕಿಗಳನ್ನು ಸ್ಪೋಟಿಸುವುದನ್ನು ನಿಷೇಧಿಸಲಾಗಿದೆ. ದೀಪಾವಳಿ ಹಬ್ಬ ಸಮಯದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಪುರಸಭೆ ವಾಹನಗಳಿಗೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನದ ನಿರ್ದೇಶನದಂತೆ https://pledge.mygov.in/swachh-diwali-shubh-diwali/ ರ ಲಿಂಕ್ ಕ್ಲಿಕ್ ಮಾಡಿ ನಿಯಮಾನುಸಾರ ದೀಪಾವಳಿ ಹಬ್ಬವನ್ನು ಆಚರಿಸಿ, ಪ್ರಮಾಣ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರಮಾಣ ಪತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ