ಮಂಗಳವಾರ, ನವೆಂಬರ್ 7, 2023
ಸಂವಿಧಾನದ ಆಶಯಗಳು ಮನೆ-ಮಾತಾಗಲಿ:ಪೆÇ್ರ.ಟಿ.ಎಂ.ಭಾಸ್ಕರ್
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಸಂವಿಧಾನ ಓದು ಕಾರ್ಯಕ್ರಮವು ನೈಜ ಸ್ವರೂಪ ಪಡೆದು, ಇಂದು ರಾಷ್ಟ್ರದ ಮತ್ತು ರಾಜ್ಯದ ಮನೆಮಾತಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಟಿ.ಎಂ ಭಾಸ್ಕರ್ ಅವರು ಹೇಳಿದರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಸಂವಿಧಾನ ಓದು” ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸಿದರೆ ಸಮ ಸಮಾಜ ನಿರ್ಮಾಣ ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು ಎಂದು ನೆನಪಿಸಿಕೊಂಡರು.
ವಿವಿಯ ಕುಲಪತಿ ಪೆÇ್ರ.ಸಾಹೇಬ್ ಅಲಿ ನಿರಗುಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ಎಂದರೆ ಹಕ್ಕುಗಳು, ಕರ್ತವ್ಯಗಳು, ತತ್ವಗಳು ಮತ್ತು ಕಾನೂನಿನ ಮೂಲಕ ಪ್ರಜಾ ಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಪವಿತ್ರ ಗ್ರಂಥವಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್. ಎನ್ ಅವರು ಮಾತನಾಡಿ, ಸಂವಿಧಾನ ಮಹತ್ವ ತಿಳಿದುಕೊಂಡರೆ ಮಾತ್ರ ಭವ್ಯವಾದ ರಾಜ್ಯ ನಿರ್ಮಿಸಲು ಸಾಧ್ಯ ಎಂದು ಹೇಳಿದರು.
ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಸಂಪೂರ್ಣವಾಗಿ ತಲ್ಲಿನರಾಗಿ ರಕ್ತಪಾತವಿಲ್ಲದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳನ್ನು ತರುವ ವ್ಯವಸ್ಥೆಯನ್ನು ನಿರ್ಮಾಣ ಮಾಡಿದ್ದಾರೆ. ಇಂಥ ಮಹತ್ವದ ದಿನದ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ, ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಅತಿ ಮುಖ್ಯ ಎಂದು ತಿಳಿಸಿದರು.
ವಿವಿಯ ಕುಲಸಚಿವರು (ಮೌಲ್ಯಮಾಪನ) ಪೆÇ್ರ. ರಮೇಶ್ ಓಲೇಕಾರ್ ಸಂವಿಧಾನ ಪೀಠಿಕೆ ಬೋಧಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಂಶೋಧನಾ ಅಧಿಕಾರಿ ಡಾ.ಮಲ್ಲಿಕಾರ್ಜುನ ಮಾನ್ಪಡೆ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ.ಸಿ.ಟಿ ಗುರುಪ್ರಸಾದ್, ರಾಷ್ಟ್ರೀಯ ಸೇವಾ ಯೋಜನೆ ಕೋಶ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಯುವ ಅಧಿಕಾರಿ ವೈ.ಎಂ ಉಪ್ಪಿನ್, ವಿತ್ತಾಧಿಕಾರಿ ಪೆÇ್ರ.ಸದ್ಯೋಜಾಥಪ್ಪ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಸಂಯೋಜನಾಧಿಕಾರಿ ಡಾ.ಕುಮಾರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ