ಬುಧವಾರ, ನವೆಂಬರ್ 8, 2023
“Women For Water, Water For Women Campaign” ಕಾರ್ಯಕ್ರಮದಡಿ ಸ್ವಸಹಾಯ ಸಂಘದ ಮಹಿಳೆಯರಿಂದ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ಅಂದೋಲನ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಜಿಲ್ಲಾ ನಗರಾಭಿವೃದ್ಧಿ ಕೋಶ ವತಿಯಿಂದ ಅಮೃತ್ 2.0 ಅಭಿಯಾನದಡಿ “Women For Water, Water For Women Campaign” ಕಾರ್ಯಕ್ರಮದಡಿ ಸ್ವಸಹಾಯ ಸಂಘದ ಮಹಿಳೆಯರಿಂದ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ಅಂದೋಲನ ನ.09ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಹೆಚ್.ರಾಘವೇಂದ್ರ ಗುರು ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ಸ್ವಸಹಾಯ ಸಂಘದ ಮಹಿಳೆಯರನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿರ್ಮಿಸಲಾದ ‘ನೀರು ಸಂಸ್ಕರಣಾ ಘಟಕ’ಕ್ಕೆ ಭೇಟಿ ನೀಡಿಸಿ, ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆ ಪ್ರಕ್ರಿಯೆ ಬಗ್ಗೆ ಹಾಗೂ ನೀರಿನ ವಿವಿಧ ಪರೀಕ್ಷಾ ಮಾದರಿ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.
ನ.09ರಂದು ಮಹಾನಗರ ಪಾಲಿಕೆ ಮತ್ತು ತೆಕ್ಕಲಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಅಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅದೇ ರೀತಿಯಾಗಿ ನ.13ರವರೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ “ಸ್ವಚ್ಛ ದೀಪಾವಳಿ ಶುಭ ದೀಪಾವಳಿ” ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ