ಸೋಮವಾರ, ಡಿಸೆಂಬರ್ 4, 2023

ಕುರುಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಡಿ.05ರಿಂದ 12ರವರೆಗೆ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಕುರುಗೋಡು ಪಟ್ಟಣ ಪ್ರದೇಶದಲ್ಲಿ ರಸ್ತೆ ಆಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ, ಡಿ.05ರಿಂದ ಡಿ.12ರವರೆಗೆ ಕುರುಗೋಡು ನಗರ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬೆಳಿಗ್ಗೆ 09 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್-2 ಗೆಣಿಕೆಹಾಳ್ ಐಪಿ ಫೀಡರ್(ಎಫ್-14 ಪೀಡರ್) ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್ ಗ್ರಾಮಗಳು. ಎಫ್-5 ಸಿಂಧಿಗೇರಿ ಐ.ಪಿ ಮಾರ್ಗದ ಬೈಲೂರು ಗ್ರಾಮ, ಎಫ್-7 ಬಾದನಹಟ್ಟಿ ಐ.ಪಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ಯರ್ರಂಗಳಿ, ಸಿಂಧಿಗೇರಿ, ಮಲ್ಲೇಶ್ವರಿ ಕ್ಯಾಂಪ್. ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ ಗ್ರಾಮಗಳು. ಎಫ್-1 ಕುರುಗೋಡು ನಗರ ಮಾರ್ಗದ ಕುರುಗೋಡು ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಕೋರಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ