ಶುಕ್ರವಾರ, ಡಿಸೆಂಬರ್ 8, 2023

ಡಿ.09ರಂದು ರಾಷ್ಟ್ರೀಯ ಲೋಕ ಅದಾಲತ್

ಬಳ್ಳಾರಿ,ಡಿ.08(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬಹುದಾದ ಹಾಗೂ ವ್ಯಾಜ್ಯ ಪೂರ್ವ ದಾವಾ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಗೊಳಿಸಲು ಡಿ.09ರಂದು ಬೆಳಿಗ್ಗೆ 10ರಿಂದ ಹಳೆಯ ನ್ಯಾಯಾಲಯದ ಕಟ್ಟಡ ಹಾಗೂ ಹೊಸ ನ್ಯಾಯಾಲಯದ ಕಟ್ಟಡ ಹಾಗೂ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿ ದೇವಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ