ಸೋಮವಾರ, ಡಿಸೆಂಬರ್ 4, 2023

ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಡಿ.13ರಂದು: ನೋಂದಣಿಗೆ ಆಹ್ವಾನ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ - 2024ರ ಅಂಗವಾಗಿ ಹಾಗೂ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿ.13ರಂದು ಏರ್ಪಡಿಸಲಾಗಿದೆ. ಆಸಕ್ತರು ಭಾಗವಹಿಸಲು ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.11ರೊಳಗಾಗಿ (ಮಧ್ಯಾಹ್ನ 3.00 ಗಂಟೆಯೊಳಗೆ) ಇ-ಮೇಲ್ ವಿಳಾಸ jdably@gmail.com ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೆಯ ತಾಲ್ಲೂಕು ಕಚೇರಿ ಆವರಣ, ಬಳ್ಳಾರಿ, ಈ ವಿಳಾಸಕ್ಕೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ. *ಸೂಚನೆಗಳು:* ಪ್ರತಿ ಸ್ಪರ್ಧಿಗೆ ಒಂದೇ ತಿನಿಸು ಸಿಹಿ ಅಥವಾ ಖಾರ (ಸಸ್ಯಾಹಾರಿ ತಿನಿಸುಗಳು ಮಾತ್ರ) ತಯಾರಿಸುವ ಅವಕಾಶವಿರುತ್ತದೆ. ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಡಿ.13ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸರಿಯಾಗಿ ಬೆಳಿಗ್ಗೆ 11 ಗಂಟೆಗೆ ಪ್ರದರ್ಶಿಸಬೇಕು. ತಯಾರಿಸಿದ ತಿನಿಸುಗಳ ಪ್ರದರ್ಶನ (Display) ಬಳಸಿದ ಸಾಮಗ್ರಿಗಳು(Ingredients), ತೋರಿಕೆ (Appearance), ರುಚಿ (Taste), ಸುವಾಸನೆ (Aroma), ಪೌಷ್ಠಿಕತೆ (Nutrients) ಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾ ಮಟ್ಟಕ್ಕೆ ಪ್ರಥಮ ಸ್ಥಾನಕ್ಕೆ ಖಾರ ತಿನಿಸು ಅಥವಾ ಸಿಹಿ ತಿನಿಸಿಗೆ ತಲಾ ರೂ.5000/- ಬಹುಮಾನವಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿ.23ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ಧರಾಗಿರಬೇಕು ಎಂದು ಅವರು ತಿಳಿಸಿದ್ದಾರೆ. *ಸ್ಪರ್ಧೆಗಳ ವಿವರ:* ಸಿರಿಧಾನ್ಯದ ಸಿಹಿ ತಿನಿಸು ಹಾಗೂ ಸಿರಿಧಾನ್ಯದ ಖಾರ ತಿನಿಸು. ಸ್ಪರ್ಧಾರ್ಥಿಗಳು: ಜಿಲ್ಲೆಯ ಎಲ್ಲಾ ಸಾರ್ವಜನಿಕರು, (ವಿದ್ಯಾರ್ಥಿಗಳು ಹೊರತು ಪಡಿಸಿ) ಸ್ಪರ್ಧೆ ನಡೆಸುವ ಸ್ಥಳ: ಜಂಟಿ ಕೃಷಿ ನಿರ್ದೇಶಕರ ಕಚೇರಿ, ಡಿ.13ರಂದು ಬೆಳಿಗ್ಗೆ 11 ಗಂಟೆ. *ಪ್ರವೇಶ ಉಚಿತ:* ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂ.08392-276224, ಮೊ.8277928008, ಮೊ.8277927999 ಗೆ ಸಂಪರ್ಕಿಸಬಹುದು ಎಂದು ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ