ಶುಕ್ರವಾರ, ಡಿಸೆಂಬರ್ 15, 2023
ಕುರುಗೋಡು: ಡಿ.16ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ):
ಕುರುಗೋಡು ಜೆಸ್ಕಾಂ ಶಾಖೆ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರಿಗೆ ಇರುವಂತಹ ಸಮಸ್ಯೆಗಳನ್ನು ನಿವಾರಿಸಲು ಡಿ.16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಕಲ್ಲುಕಂಬ ಗ್ರಾಮದ, ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.
ಕುರುಗೋಡು ಜೆಸ್ಕಾಂ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ