ಗುರುವಾರ, ಡಿಸೆಂಬರ್ 14, 2023
ವಿದ್ಯುತ್ ವ್ಯತ್ಯಯ ಡಿ.18ರಂದು
ಬಳ್ಳಾರಿ,ಡಿ.14(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಬರುವ 33/11 ಕೆ.ವಿ ತೆಕ್ಕಲಕೋಟೆ ಮತ್ತು ಕರೂರು ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿ.18ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
33/11 ಕೆ.ವಿ ತೆಕ್ಕಲಕೋಟೆ ಕೇಂದ್ರ, ಬಲಕುಂದಿ, ಉಡೆಗೋಳ, ಹಳೆಕೋಟೆ ಮತ್ತು ತೆಕ್ಕಲಕೋಟೆ ಪಟ್ಟಣ, 33/11 ಕೆ.ವಿ ಕರೂರು ಕೇಂದ್ರ, ದಾರೂರು, ಕರೂರು, ಗೋಸುಬಾಳೆ, ಮಾಟಸುಗುರ್, ಉತ್ತನೂರು ಇನ್ನೂ ಮುಂತಾದ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ