ಮಂಗಳವಾರ, ಡಿಸೆಂಬರ್ 19, 2023
ಜಿಲ್ಲೆಯಲ್ಲಿ ಡಿ.19ರಿಂದ 29ರವರೆಗೆ ಡಿಪ್ಲೋಮಾ ಸೆಮಿಸ್ಟರ್‍ನ ಥಿಯರಿ ಪರೀಕ್ಷೆಗಳು
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಡಿಸಿ ಮಿಶ್ರಾ
ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಡಿ.19ರಿಂದ 29ರವರೆಗೆ ತಾಂತ್ರಿಕ ಪರೀಕ್ಷಾ ಮಂಡಳಿಯವರಿಂದ ಡಿಪ್ಲೋಮಾ ಸೆಮಿಸ್ಟರ್‍ನ ಥಿಯರಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಜಿಲ್ಲೆಯ ಬಳ್ಳಾರಿ, ಕಂಪ್ಲಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳಲ್ಲಿ ಈ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 05.30ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ