ಸೋಮವಾರ, ಡಿಸೆಂಬರ್ 11, 2023

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಡಿ.11(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಡಿ.11ರಿಂದ 16ರವರೆಗೆ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಎಲ್‍ಇಡಿ ಮತ್ತು ಡಿಪಿಇಡಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಎಲ್‍ಇಡಿ ಮತ್ತು ಡಿಪಿಇಡಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿರ್ಭಂದಿತ ಪ್ರದೇಶವೆಂದೂ ಹಾಗೂ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಅವರು ಆದೇಶಿಸಿದ್ದಾರೆ. ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ