ಸೋಮವಾರ, ಡಿಸೆಂಬರ್ 18, 2023
ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಹಭಾಗೀದರ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಡಿ.21ರಂದು
ಬಳ್ಳಾರಿ,ಡಿ.18(ಕರ್ನಾಟಕ ವಾರ್ತೆ):
ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಡಿ.20 ಮತ್ತು 21ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಡಿ.20ರಂದು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಹಾಗೂ ಸರ್ಕಾರಿ ಶಾಲೆಗಳು, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ಇತರೆ ವಸತಿ ನಿಲಯ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡುವರು.
ಡಿ.21ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಕ್ಕಳ ರಕ್ಷಣೆ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ