ಗುರುವಾರ, ಡಿಸೆಂಬರ್ 21, 2023

ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಡಿ.22ರಂದು

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಡಿ.22 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಹಮ್ಮಿಕೊಳ್ಳಲಾಗಿದೆ. ಮುಂದುವರೆದು ಕೇಂದ್ರ ವಲಯ/ರಾಜ್ಯ ವಲಯ/ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 2023-24ನೇ ಸಾಲಿನ ನವೆಂಬರ್-2023ರ ಅಂತ್ಯದವರೆಗಿನ ಮಾಹೆವಾರು ಪ್ರಗತಿ ವರದಿಗಳನ್ನು ಸಮಿತಿ ಪರಿಶೀಲಿಸಲಿದೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ