ಶುಕ್ರವಾರ, ಡಿಸೆಂಬರ್ 22, 2023

ಡಿ.23ರಂದು ಸಿರುಗುಪ್ಪ ವ್ಯಾಪ್ಯಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.22(ಕರ್ನಾಟಕ ವಾರ್ತೆ): ಸಿರುಗುಪ್ಪ ವ್ಯಾಪ್ತಿಯ 110/33/11 ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಕಾಮಗಾರಿ ಮತ್ತು ಇಂಡಸ್ಟ್ರಿಯಲ್ ಫೀಡರ್(ಫೀಡರ್ 12, 13)ಗಳ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.23ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: 110/33/11 ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರ ಮತ್ತು 33/11 ಕೆವಿ ಹಚ್ಚೊಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಸಿರುಗುಪ್ಪ ನಗರ, ಬಾಗೇವಾಡಿ, ರಾರಾವಿ, ಬಿ.ಎಂ.ಸುಗೂರು, ಬೀರಳ್ಳಿ, ಹಚ್ಚೊಳ್ಳಿ, ಕುಡದರಹಾಳು, ರಾವಿಹಾಳ್, ಬಗ್ಗೂರು, ದೇಶನೂರು, ಕೆ.ಸುಗೂರು, ಕೆಂಚನಗುಡ್ಡ, ಕುರುವಳ್ಳಿ ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ ಎಂದು ಸಿರುಗುಪ್ಪ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ