ಶುಕ್ರವಾರ, ಡಿಸೆಂಬರ್ 22, 2023

ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಡಿ.27ರಂದು

ಬಳ್ಳಾರಿ,ಡಿ.22(ಕರ್ನಾಟಕ ವಾರ್ತೆ): “ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರ ಯುಗದಲ್ಲಿ ಗ್ರಾಹಕರ ರಕ್ಷಣೆ” ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಡಿ.27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಮುಖ್ಯ ರಸ್ತೆಯ ಶ್ರೀಮೇದಾ ಪದವಿಪೂರ್ವ ವಿದ್ಯಾಲಯದ ಮೇದಾ ಆಡಿಟೋರಿಯಮ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಘನ ಉಪಸ್ಥಿತಿ ಇರುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಕಾನೂನು ಮಾಪನ ಶಾಸ್ತ್ರದ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಜಿಲ್ಲಾ ಪರಿವೀಕ್ಷಣಾ ಘಟಕದ ಜಿಲ್ಲಾ ಅಂಕಿತಾಧಿಕಾರಿ ಡಾ.ಪ್ರಕಾಶ್ ಎಸ್.ಪುಣ್ಯಶೆಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ಅವರು ಸೇರಿದಂತೆ ಇತರರು ಉಪಸ್ಥಿತರಿರುವರು. *ಉಪನ್ಯಾಸ:* ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ವಕೀಲರಾದ ಕೆ.ಎರ್ರಿಗೌಡ ಅವರು - “ತಾಂತ್ರಿಕ ಯುಗದಲ್ಲಿ ಗ್ರಾಹಕರ ಸಾರ್ವತ್ರಿಕ ಹಕ್ಕುಗಳು”. ವಕೀಲರಾದ ಎನ್.ಪ್ರಕಾಶ್ ಅವರು - “ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರ ಯುಗದಲ್ಲಿ ಗ್ರಾಹಕರ ರಕ್ಷಣೆ”. ಹಿರಿಯ ವಕೀಲರಾದ ಬಿ.ವೆಂಕಟೇಶ್ ಪ್ರಸಾದ್ ಅವರು, ಗ್ರಾಹಕರ ಸಂರಕ್ಷಣಾ ಕಾಯ್ದೆ 2019ರ ಕಲಂ 72”ರ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡುವರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ