ಮಂಗಳವಾರ, ಡಿಸೆಂಬರ್ 26, 2023
ಕನ್ನಡ ಸಾಹಿತ್ಯ ಪರಿಷತ್ತು: ಕಾವ, ಜಾಣ, ರತ್ನ ಪರೀಕ್ಷೆಗಳು ಜ.5ರಿಂದ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಜನವರಿ 5, 6 ಮತ್ತು 7 ರಂದು ರಾಜ್ಯದ 20 ಕೇಂದ್ರಗಳಲ್ಲಿ ಆಯೋಜಿಸಿದೆ.
ಪರೀಕ್ಷಾ ಪ್ರವೇಶ ಪತ್ರವನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 22 ರ ನಂತರವೂ ಪ್ರವೇಶ ಪತ್ರ ತಲುಪದಿದ್ದಲ್ಲಿ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-26612991, 26623584, 26523867 ಹಾಗೂ ಮೊ.8618296186 ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ