ಶನಿವಾರ, ಡಿಸೆಂಬರ್ 30, 2023

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಷ್ಟು ರಿಯಾಯಿತಿ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪುಸ್ತಕ ಪ್ರಿಯರು ಇದರ ಸದುಪಯೋಗ ಪಡೆಯಬೇಕೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ ಸಿಂಗ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿಕೂಡ ಈ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ