ಬುಧವಾರ, ಡಿಸೆಂಬರ್ 6, 2023

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನ; ಜಿಲ್ಲಾಡಳಿತದಿಂದ ಗೌರವ ನಮನ

ಬಳ್ಳಾರಿ,ಡಿ.06(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ವರ್ಷದ ಮಹಾ ಪರಿನಿರ್ವಾಣ ದಿನ ಅಂಗವಾಗಿ ನಗರದ ಕೌಲ್‍ಬಜಾರ್‍ನ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್, ಸಹಾಯಕ ನಿರ್ದೇಶಕಿ ಗ್ರೇಡ್-1 ಮಮತಾ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ