ಶನಿವಾರ, ಡಿಸೆಂಬರ್ 30, 2023

ಕುಡಿಯುವ ನೀರು, ಮೇವು ಕೊರತೆಯಾಗದಂತೆ ನೋಡಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು, ನಗರದ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ವಿಮ್ಸ್)ಯ ಆಡಳಿತ ಭವನದ ಸಭಾಂಗಣದಲ್ಲಿ ಬರ ನಿರ್ವಹಣೆಯ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೆÇೀರ್ಸ್ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬರಬಹುದಾದಂತಹ ಗ್ರಾಮಗಳನ್ನು ಗುರುತಿಸಿ, ಖಾಸಗಿ ಬೋರ್ವೆಲ್ ಮತ್ತು ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಖ್ಯವಾಗಿ ಬಳ್ಳಾರಿ ತಾಲ್ಲೂಕಿನ ಹರಗಿನದೋಣಿ, ಹಲಕುಂದಿ ಗ್ರಾಮಗಳಲ್ಲಿ ಉಲ್ಬಣವಾಗುವ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು. ಗ್ರಾಮೀಣ ಭಾಗಗಳಲ್ಲಿ ಆರ್‍ಓ ಘಟಕಗಳನ್ನು ಶುದ್ಧಗೊಳಿಸಿಟ್ಟುಕೊಳ್ಳಬೇಕು. ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಬಳ್ಳಾರಿ ಹೋಬಳಿ ಮತ್ತು ಸಂಡೂರು ಹೋಬಳಿಯಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ತಹಶೀಲ್ದಾರ್ ಗುರುರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ