ಗುರುವಾರ, ಡಿಸೆಂಬರ್ 14, 2023

ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಡಿ.14(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 22 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಕೆ.ಜಲಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ