ಬುಧವಾರ, ಡಿಸೆಂಬರ್ 13, 2023

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗಾಗಿ ಮನವಿ

ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ): ನಗರದ ಬ್ರೂಸ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮೋತಿ ವೃತ್ತದ ಹತ್ತಿರದ ಬಸವೇಶ್ವರ ವಿಗ್ರಹ ಮುಂದುಗಡೆ ರಸ್ತೆಯಲ್ಲಿ ಸುಮಾರು 40ರಿಂದ 50 ವರ್ಷದ ಅನಾಮಧೇಯ ವ್ಯಕ್ತಿಯು ಡಿ.10ರಂದು ಮೃತಪಟ್ಟಿದ್ದು, ಮೃತನ ದೇಹವು ವಿಮ್ಸ್‍ನ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ತಿಳಿದಿರುವುದಿಲ್ಲ. ಚಹರೆ ಗುರುತು: ಅಂದಾಜು 5.4 ಅಡಿ ಎತ್ತರ, ಕಪ್ಪು ಮೈ ಬಣ್ಣ, ತೆಳುವಾದ ಮೈಕಟ್ಟು, ಕೋಲು ಮುಖ, ತಲೆಯಲ್ಲಿ ಕಪ್ಪು ಕೂದಲು, ಕಪ್ಪು-ಬಿಳಿ ಮಿಶ್ರಿತ ಮೀಸೆ ಮತ್ತು ಗಡ್ಡ ಬಿಟ್ಟಿರುತ್ತಾನೆ. ಆಕಾಶ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆ ದೂ.08392-272022, ಪಿಐ ಮೊ.9480803045, ಬಳ್ಳಾರಿ ಡಿಎಸ್‍ಪಿ ಮೊ.9480803020 ಗೆ ಸಂಪರ್ಕಿಸಬಹುದು ಎಂದು ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ