ಗುರುವಾರ, ಡಿಸೆಂಬರ್ 21, 2023

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ವಿಮೆಗೆ ನೋಂದಾಯಿಸಿಕೊಳ್ಳಿ

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಳ್ಳಲು ಇದೇ ಡಿ.30ರಂದು ಕೊನೆಯ ದಿನವಾಗಿದ್ದು, ರೈತರು ಕಡಲೆ-ಮಳೆಆಶ್ರಿತ ಹಾಗೂ ಕಡಲೆ-ನೀರಾವರಿ ಬೆಳೆಗಳಿಗೆ (ಕಡಲೆ-ನೀರಾವರಿ ಬೆಳೆ ವಿಮೆ ಕಪ್ಪಗಲ್ಲು ಮತ್ತು ಯರಿಂಗಳಿ ಗ್ರಾಮಗಳಿಗೆ ಮಾತ್ರ) ವಿಮೆ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗುತ್ತದೆ. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಓನ್ ಕೇಂದ್ರ/ರೈತರು ತಮ್ಮ ವ್ಯವಹಾರದ ಬ್ಯಾಂಕ್‍ಗಳಿಗೆ ಸಂಪರ್ಕಿಸಬಹುದು. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಪ್ಯೂಚರ್ ಜನರಲಿ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (ಮೊ.9743442928) ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ