ಬುಧವಾರ, ಡಿಸೆಂಬರ್ 20, 2023
ಕುರುಗೋಡಿನ ಗಾಂಧಿತತ್ವ ಆಧಾರಿತ ಬಾಲಕಿಯರ ವಸತಿ ಶಾಲೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ಪರಿಶೀಲನೆ
ಬಳ್ಳಾರಿ,ಡಿ.20(ಕರ್ನಾಟಕ ವಾರ್ತೆ):
ಜಿಲ್ಲೆಯ ಕುರುಗೋಡು ಪಟ್ಟಣದ ಗಾಂಧಿತತ್ವ ಆಧಾರಿತ ಬಾಲಕಿಯರ ವಸತಿ ಶಾಲೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿ ಪರಿಶೀಲನೆ ಮಾಡಿ, ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು, ‘ಕೂಡಲೇ ಇನ್ನು ಒಂದು ವಾರದಲ್ಲಿ ಶಾಲೆಯನ್ನು ಸ್ಥಳಾಂತರ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎ.ಕೆ.ಜಲಾಲಪ್ಪ ಅವರಿಗೆ ಸೂಚಿಸಿದರು.’
ಶಾಲೆಯ ನೂತನ ಕಟ್ಟಡಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಸಂಪರ್ಕಿಸಿದ್ದು, ಕಟ್ಟಡ ಜಾಗಕ್ಕಾಗಿ ಸೂಕ್ತ ಕ್ರಮಕೈಗೊಂಡು ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಈಗಾಗಲೇ ನಿವೇಶನ ಲಭ್ಯವಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ವಿಳಂಬವಾದರೇ, ಡಿಎಂಎಫ್ ಅನುದಾನದಲ್ಲಿ ಅಂದಾಜು ರೂ.10ಕೋಟಿ ಮಂಜೂರು ಮಾಡಲು ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸೂಕ್ತ ವಾತಾವರಣ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎ.ಕೆ.ಜಲಾಲಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ