ಬುಧವಾರ, ಡಿಸೆಂಬರ್ 6, 2023
ಪ್ರಗತಿಪರ ದೃಷ್ಟಿಕೋನವೇ ಅಂಬೇಡ್ಕರ್ ಅವರ ಕನಸು: ಪ್ರೊ.ಸಾಹೇಬ್ ಅಲಿ ನಿರಗುಡಿ
ಬಳ್ಳಾರಿ,ಡಿ.06(ಕರ್ನಾಟಕ ವಾರ್ತೆ):
ದೇಶದ ಭವಿಷ್ಯವನ್ನು ಪ್ರಗತಿಪರ ದೃಷ್ಡಿಕೋನದಿಂದ ನಿರ್ಮಿಸುವಲ್ಲಿ ಡಾ.ಬಿ.ಆರ್ ಅಂಬೇಡ್ಕರ್‍ರವರ ಕೊಡುಗೆ ಅಪಾರ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಾಹೇಬ್ ಅಲಿ ನಿರಗುಡಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿಶೇಷ ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ 67ನೇ ‘ಮಹಾ ಪರಿನಿಬ್ಬಾಣ ದಿನ’ ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಕೆಲಸ ಮತ್ತು ಆದರ್ಶಗಳು ದೇಶದ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಭಾರತವು ರಾಜಕೀಯವಾಗಿ ಮಾತ್ರವಲ್ಲದೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಜೆಗಳಿಗೆ ಸ್ವಾತಂತ್ರ್ಯ ಸಿಗಬೇಕೆಂದು ಡಾ.ಬಿ.ಆರ್. ಅಂಬೇಡ್ಕರ್‍ರವÀರು ಶ್ರಮಿಸಿದರು. ಇಂದಿನ ಭಾರತವನ್ನು ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ವಿಜ್ಞಾನ ನಿಕಾಯದ ಡೀನರಾದ ಡಾ.ಅನಂತ್ ಎಲ್ ಝಂಡೇಕರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಶೋಷಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಕಠಿಣ ಮತ್ತು ಜಾತಿ ವ್ಯವಸ್ಥೆಯ ಸಂಕೋಲೆಯಿಂದ ಮುಕ್ತವಾದ ಸಮಾಜವನ್ನು ನಿರ್ಮಿಸಲು ಪ್ರಜಾಪ್ರಭುತ್ವದ ಅಡಿಪಾಯವಾದ ಸಂವಿಧಾನವನ್ನು ರಚಿಸಲು ಸತತವಾಗಿ 9 ತಿಂಗಳು ಶ್ರಮಿಸಿ 25 ಸಾವಿರ ಪುಟಗಳ ಸಂವಿಧಾನ ಬರೆದರು. ‘ಅಂಬೇಡ್ಕರ್’ ಎಂಬುದು ಸಂಸ್ಕøತ ಪದವಾಗಿದ್ದು, ಇದರ ಅರ್ಥ ‘ಮಹಾನ್ ದೇವರು’ ಎಂದು ವಿವರಿಸಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ್ ಎಸ್.ಎನ್ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್‍ರವರು ಅಸ್ಪøಶ್ಯತೆ ನಿವಾರಣೆ , ಭಾರತೀಯ ಸಂವಿಧಾನ ರಚನೆ ಮತ್ತು ಬೌದ್ಧ ಧರ್ಮದ ಪುನರುಜ್ಜೀವನಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜ ಸುಧಾರಣೆಯ ವೈಚಾರಿಕತೆಗಳಿಂದ ಅವರು ವಿಶ್ವದ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂವಿಧಾನಾತ್ಮಕವಾಗಿ ಒದಗಿಸಿರುವ ಮೀಸಲಾತಿಯ ಪ್ರ್ರಾಮುಖ್ಯತೆ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ವಿತ್ತಾಧಿಕಾರಿ ಪ್ರೊ. ಸದ್ಯೋಜಾಥಪ್ಪ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಕೇವಲ ವರ್ಗಕ್ಕೆ ಮಾತ್ರ ಸೀಮಿತಗೊಳಿಸದೆ ಎಲ್ಲರೂ ಅವರ ಪ್ರಗತಿ ಕೇಂದ್ರಿತ ಚಿಂತನೆಗಳ ಅಡಿಪಾಂiÀiದಲ್ಲಿ ಮುನ್ನಡೆದರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್‍ಸಿ-ಎಸ್‍ಟಿ ಘಟಕದ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ ಮಾನಸ್, ಅಣ್ಣೋಜಿ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ