ಗುರುವಾರ, ಡಿಸೆಂಬರ್ 21, 2023

ಗಂಡ, ಹೆಂಡತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): ನಗರದ 05ನೇ ವಾರ್ಡ್, ಪಾತ್ರ ಬೂದಿಹಾಳ್, ಹನುಮಾನ್ ನಗರ, ಕಾಕರ್ಲತೋಟ ಗ್ರಾಮದ ನಿವಾಸಿ ಜಿ.ಗೋವಿಂದಪ್ಪ ಎನ್ನುವ 45 ವóರ್ಷದ ಗಂಡ ಹಾಗೂ ರಾಧ ಎನ್ನುವ 40 ವರ್ಷದ ಹೆಂಡತಿ ಸೇರಿ ಇಬ್ಬರೂ ಅ.30ರಂದು ಕಾಣೆಯಾಗಿದ್ದು, ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಜಿ.ಗೋವಿಂದಪ್ಪನ ಚಹರೆ ಗುರುತು: ಎತ್ತರ 5.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ತಿಳಿ ಹಸಿರು ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳನ್ನು ಮಾತನಾಡುತ್ತಾನೆ. ಶ್ರೀಮತಿ ರಾಧ ಅವರ ಚಹರೆ ಗುರುತು: ಎತ್ತರ 5.2 ಅಡಿ, ಕೆಂಪನೆ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತೆಲುಗು ಭಾಷೆ ಮಾತನಾಡುತ್ತಾಳೆ. ಇವರ ಇಬ್ಬರ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯ ದೂ.08392-250033, ಮೊ.9480803096 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ