ಮಂಗಳವಾರ, ಡಿಸೆಂಬರ್ 26, 2023
ಸಂಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ.
ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಇ-ಮೇಲ್ kar-temperance@gmail.com ಅಥವಾ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ.ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸಬಹುದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ