ಮಂಗಳವಾರ, ಡಿಸೆಂಬರ್ 19, 2023
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಡಿಸೆಂಬರ್ 20 ಮತ್ತು 21 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅವರು ಈ ಎರಡು ದಿನಗಳ ಕಾಲ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ, ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಡಿ.20ರಂದು ಬೆಳಿಗ್ಗೆ 07 ಗಂಟೆಯಿಂದ ರಾತ್ರಿ 08 ಗಂಟೆಯವರೆಗೆ ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ದತ್ತು ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ ಮತ್ತು ಸರ್ಕಾರಿ ಆಸ್ಪತ್ರೆ, ಶಾಲೆಗಳಿಗೆ ಭೇಟಿ ನೀಡುವರು. (ಬೆಳಿಗ್ಗೆ 11 ಗಂಟೆಗೆ ರೀಡ್ಸ್ ಸಂಸ್ಥೆಯು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು).
ಡಿ.21ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 01.30ರವರೆಗೆ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗೀಧಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ/ಸಮಾಲೋಚನಾ ಸಭೆ ನಡೆಸುವರು. ಬಳಿಕ ಮಧ್ಯಾಹ್ನ 01.30ಕ್ಕೆ ಪತ್ರಿಕಾಗೋಷ್ಠಿ ನಡೆಸುವರು.
ಡಿ.22ರಂದು ಬೆಳಿಗ್ಗೆ 07ಕ್ಕೆ ಬಳ್ಳಾರಿಯಿಂದ ಭಾಲ್ಕಿಗೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ