ಶನಿವಾರ, ಡಿಸೆಂಬರ್ 30, 2023

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಈಶಾನ್ಯ ಕರ್ನಾಟಕ ಪದವೀಧರ ಮತದಾರರ ಪಟ್ಟಿ ಪರಿಷ್ಕರಿಸಿ, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. *ಅಂತಿಮ ಮತದಾರ ಪಟ್ಟಿ ವಿವರ:* 91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ತಾಲ್ಲೂಕು ಒಳಗೊಂಡಂತೆ 13,744 ಪುರುಷರು, 8,408 ಮಹಿಳೆಯರು ಮತ್ತು 4 ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 22,156 ಪದವೀಧರ ಮತದಾರರಿದ್ದಾರೆ. ಮತದಾರರ ಪಟ್ಟಿ ಸಿದ್ಧಪಡಿಸುವಿಕೆ ಕುರಿತು ಅಧಿಸೂಚನೆ ಹೊರಡಿಸಿದ ದಿನಾಂಕ ಸೆ.30, ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗದಿಪಡಿಸಿದ ಅವಧಿ ನ.23 (ಗುರುವಾರ) ರಿಂದ ಡಿ.09 (ಶನಿವಾರ) ರವರೆಗೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಡಿ.30 (ಶನಿವಾರ). ಚುನಾವಣಾ ಆಯೋಗ ನಿಗಧಿಪಡಿಸಿದಂತೆ ಅರ್ಜಿದಾರರು ದಿ:-01-11-2020 ಕ್ಕಿಂತ ಮುಂಚಿತವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿವರ ಹಾಗೂ ಸ್ಥಳಿಯ ನಿವಾಸಿಯ ದಾಖಲೆಯನ್ನು ಸಲ್ಲಿಸಿ, ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಅವಕಾಶವಿದೆ. ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 01.01.2024 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-18 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ