ಬುಧವಾರ, ಡಿಸೆಂಬರ್ 13, 2023
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮ ನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ):
ಜಿಲ್ಲಾ ಮಟ್ಟದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಸೆಕ್ಷನ್ 24ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಸಮಾಜ ಸೇವಕರು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಪ್ರತಿನಿಧಿಗಳನ್ನು (02 ಪುರುಷರು, 02 ಮಹಿಳೆಯರು) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮ ನಿರ್ದೇಶನ ಮಾಡಲು ಆಸಕ್ತಿಯುಳ್ಳ ಸಮಾಜ ಸೇವಕರು ಡಿ.27ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ದಾಖಲೆಗಳು: ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ ಬಗ್ಗೆ ದಾಖಲಾತಿ, ಆಧಾರ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2 ಭಾವಚಿತ್ರ.
ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932, ಮೊ.9480843023ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ