ಮಂಗಳವಾರ, ಡಿಸೆಂಬರ್ 19, 2023

ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರ

ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ): ರೀಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಿಎಸಿಎಲ್ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಡಿ.20 ಮತ್ತು 21ರಂದು ಬೆಳಿಗ್ಗೆ 10ರಿಂದ ಸಂಜೆ 05ರ ವರೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಡಿ.20ರಂದು ಮೊದಲನೇ ದಿನದ ಕಾರ್ಯಗಾರವನ್ನು ಬೆಳಿಗ್ಗೆ 10 ಗಂಟೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಅವರು ಉದ್ಘಾಟಿಸುವರು. ರೀಡ್ಸ್ ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಉಚ್ಛ ನ್ಯಾಯಾಲಯದ ಅಡಿಷನಲ್ ಅಡ್ವೋಕೇಟ್ ಜನರಲ್ ಕೇಶವ ರೆಡ್ಡಿ, ಸಿಡಬ್ಲ್ಯೂಸಿ ಅಧ್ಯಕ್ಷೆ ವಿಜಯಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ್.ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಹೆಚ್.ಸಿ.ರಾಘವೇಂದ್ರ, ವಿಜಯನಗರ ಜಿಲ್ಲೆಯ ಸಖಿ ಸಂಸ್ಥೆಯ ಕಾರ್ಯನಿರ್ವಾಹಜ ನಿರ್ದೇಶಕ ಡಾ.ಭಾಗ್ಯಲಕ್ಷ್ಮೀ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ, ಮೈಸೂರು ಆರ್‍ಎಲ್‍ಎಚ್‍ಪಿ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಸಿಎಸಿಎಲ್‍ಕೆ ಸಂಚಾಲಕಿ ಸರಸ್ವತಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುವರು. ಡಿ.21ರಂದು ಎರಡನೇ ದಿನದ ಕಾರ್ಯಗಾರವನ್ನು ಬೆಳಿಗ್ಗೆ 10 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಉದ್ಘಾಟಿಸುವರು. ರೀಡ್ಸ್ ಸಂಸ್ಥೆಯ ನಿರ್ದೇಶಕ ಹನುಮಂತರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್., ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ