ಶನಿವಾರ, ಡಿಸೆಂಬರ್ 2, 2023

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಡಿ.02(ಕರ್ನಾಟಕ ವಾರ್ತೆ): ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ 2023-24 ನೇ ಸಾಲಿನಲ್ಲಿ ವಿವಿಧ ನಿಗಮಗಳಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್‍ನಲ್ಲಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ