ಗುರುವಾರ, ಡಿಸೆಂಬರ್ 21, 2023
ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ):
2023-24ನೇ ಸಾಲಿನ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದಲ್ಲಿ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಕೃಷಿ ಇಲಾಖೆ ವತಿಯಿಂದ ಸಹಾಯಧನ ವಿತರಿಸಲಾಗುವುದು. ಆಸಕ್ತ ರೈತರು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು ಅಥವಾ ಬಳ್ಳಾರಿ ರೈತ ಸಂಪರ್ಕ ಕೇಂದ್ರ ಮೊ.8277930411, ರೂಪನಗುಡಿ ರೈತ ಸಂಪರ್ಕ ಕೇಂದ್ರ ಮೊ.8277930425, ಮೋಕ ರೈತ ಸಂಪರ್ಕ ಕೇಂದ್ರ ಮೊ.8277934297, ಕುರುಗೋಡು ರೈತ ಸಂಪರ್ಕ ಕೇಂದ್ರ ಮೊ.8277934300, ಕೋಳೂರು ರೈತ ಸಂಪರ್ಕ ಕೇಂದ್ರ ಮೊ.6360645255 ಗೆ ಸಂಪರ್ಕಿಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ