ಗುರುವಾರ, ಡಿಸೆಂಬರ್ 7, 2023

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿ ನೇಮಕ

ಬಳ್ಳಾರಿ,ಡಿ.07(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಸಮಾಜ ವಿಜಾÐನ ನಿಕಾಯದ ಡೀನರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಗುರುವಾರದಂದು, ನೂತನ ಕುಲಪತಿಗಳಿಗೆ ನಿಕಟಪೂರ್ವ ಹಂಗಾಮಿ ಕುಲಪತಿಯಾಗಿದ್ದ ಡಾ.ಸಾಹೇಬ್ ಅಲಿ ಎಚ್ ನಿರಗುಡಿ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್., ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓ ಓಲೇಕಾರ್, ವಿತ್ತಾಧಿಕಾರಿ ಪ್ರೊ.ಸದ್ಯೋಜಾಥಪ್ಪ ಈರ್ವರನ್ನು ಅಭಿನಂದಿಸಿದರು. ವಿಶ್ವವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ