ಸೋಮವಾರ, ಡಿಸೆಂಬರ್ 4, 2023

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರಾಗಲು ಅರ್ಜಿ ಆಹ್ವಾನ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಸೆಕ್ಷನ್ 24 ರನ್ವಯ ಜಿಲ್ಲಾ ಮತ್ತು ಉಪವಿಭಾಗ ಮಟ್ಟದಲ್ಲಿ 03 ತಿಂಗಳಿಗೊಮ್ಮೆ ನಡೆಯುವ ಸಭೆಗಳಿಗೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರನ್ನು ಶಾಶ್ವತ ಆಹ್ವಾನಿತರೆಂದು ನಾಮ ನಿರ್ದೇಶನ ಮಾಡಲು ಆದೇಶಿಸಿದ್ದು, ಅದರಂತೆ ಜಿಲ್ಲಾ ಮಟ್ಟದ ಸಮಿತಿಗೆ ನಾಮ ನಿರ್ದೇಶನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರಾಗಲು ಆಸಕ್ತಿಯುಳ್ಳವರು ಡಿ.16ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ