ಶುಕ್ರವಾರ, ಡಿಸೆಂಬರ್ 22, 2023
ನಿಗದಿತ ಕಾಲಾವಧಿಯೊಳಗೆ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಬಳಕೆಯಾಗಲಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಡಿ.22(ಕರ್ನಾಟಕ ವಾರ್ತೆ):
ಸರ್ಕಾರವು ವಿವಿಧ ಇಲಾಖೆಗಳಿಗೆ ನೀಡಿರುವÀ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನವನ್ನು ನಿಗದಿತ ಕಾಲಾವಧಿಯೊಳಗೆ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಎಸ್‍ಸಿಎಸ್‍ಪಿ-ಟಿಎಸ್‍ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಬಿಡುಗಡೆಯಾಗಿದ್ದು, ಇದನ್ನು ಸಂಪೂರ್ಣವಾಗಿ ಕೆಲವು ಇಲಾಖೆಗಳ ಅಧಿಕಾರಿಗಳು ಖರ್ಚು ಮಾಡಿರುವುದಿಲ್ಲ. ಮಾ.31 ರೊಳಗಾಗಿ ಖರ್ಚು ಮಾಡಬೇಕು. ಇಲ್ಲದಿದ್ದರೆ 2013 ರ ಆಕ್ಟ್ ಪ್ರಕಾರ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಬಿಡುಗಡೆಯಾದ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ನಿಗದಿತ ಸಮಯದಲ್ಲಿ ಬಳಕೆ ಮಾಡದೇ ಇದ್ದಲ್ಲಿ, ಸಂಬಂಧಿಸಿದ ಇಲಾಖಾ ಅಧಿಕಾರಿಗಳೇ ನೇರ ಹೊಣೆಯಾಗುತ್ತೀರಿ ಎಂದು ಎಚ್ಚರಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ವಿವಿಧ ಯೋಜನೆಗಳಡಿ ಶೀಘ್ರದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಸೌಲಭ್ಯ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ